ಕರ್ನಾಟಕ ಸಂಘ ಶಾರ್ಜಾದ 24ನೇ ವಾರ್ಷಿಕೋತ್ಸವ: ರಾಜ್ಯೋತ್ಸವ ಸಂಭ್ರಮಕ್ಕೆ ಯಕ್ಷಪ್ರಿಯೆ ಆರ್ಷಿಯಾ ಖಾನ್ ವಿಶೇಷ ಅತಿಥಿ

0
13

ಶಾರ್ಜಾ : ಕರ್ನಾಟಕ ಸಂಘ ಶಾರ್ಜಾ (Indian Association Sharjah ಆಶ್ರಯದಲ್ಲಿ) ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಸಂಘದ 24ನೇ ವಾರ್ಷಿಕೋತ್ಸವದ ಅಂಗವಾಗಿ ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ನವೆಂಬರ್ 15, 2026ರಂದು ಮಧ್ಯಾಹ್ನ 3:30ರಿಂದ ಅಜ್ಮಾನ್‌ನ ನಾರ್ತ್ ಗೇಟ್ ಬ್ರಿಟಿಷ್ ಸ್ಕೂಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತ ಅತಿಥಿಯಾಗಿ Daijiworld TVಯ ಜನಪ್ರಿಯ ಗೇಮ್ ಶೋ ನಿರೂಪಕಿ, ‘ಯಕ್ಷಪ್ರಿಯೆ’ ಆರ್ಷಿಯಾ ಖಾನ್ ಭಾಗವಹಿಸಲಿದ್ದಾರೆ. ಅವರ ಉಪಸ್ಥಿತಿಯು ಕಾರ್ಯಕ್ರಮದ ಆಕರ್ಷಣೆಯನ್ನು ಹೆಚ್ಚಿಸಲಿದೆ.

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದೊಂದಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಅನಿವಾಸಿ ಕನ್ನಡಿಗರ ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯಲಿದೆ.

ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಕನ್ನಡಾಭಿಮಾನಿಗಳು, ಅನಿವಾಸಿ ಕನ್ನಡಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಸಂಘ ಶಾರ್ಜಾ ಆತ್ಮೀಯವಾಗಿ ಆಹ್ವಾನಿಸಿದೆ.