ಮೂಡುಬಿದಿರೆ: ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಹಿರಿಯ ಪುರೋಹಿತರಾದ ಅಲಂಗಾರು ವೇ.ಮೂ. ಈಶ್ವರ ಭಟ್ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೂಡುಬಿದಿರೆ ತಾಲೂಕಿನ ಹಿರಿಯ ಪುರೋಹಿತರಾಗಿ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಈಶ್ವರ ಭಟ್ ಅವರು ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿ, ದೇವಸ್ಥಾನದ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

