ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಅಕ್ಷಿತ್ ರೈ ತೇರ್ಗಡೆ

0
7

ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಅಕ್ಷಿತ್ ರೈ ಅವರು ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 24ರಿಂದ 26ರವರೆಗೆ ಬೆಂಗಳೂರಿನಲ್ಲಿ ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಈ ಪರೀಕ್ಷೆ ನಡೆದಿತ್ತು. ಇದರಲ್ಲಿ ಅಕ್ಷಿತ್ ರೈ ಅವರು ಯಶಸ್ವಿಯಾಗಿ ತೇರ್ಗಡೆಯಾಗಿದ್ದಾರೆ.

ಮೂಲತಃ ಕಾಸರಗೋಡು ಜಿಲ್ಲೆಯವರಾದ ಅಕ್ಷಿತ್ ರೈ ಅವರು ಪ್ರಸ್ತುತ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.