ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಸಾವು

0
54

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಕುಸಿದುಬಿದ್ದು ಅಸ್ವಸ್ಥ ಸ್ಥಿತಿಯಲ್ಲಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತರನ್ನು ಕರ್ವಾಲು ನಿವಾಸಿ ಪರಮೇಶ್ವರ್ ನಾಯಕ್ (78) ಎಂದು ಗುರುತಿಸಲಾಗಿದೆ.

ಕುಕ್ಕಿಕಟ್ಟೆಯಿಂದ ಇಂದಿರಾನಗರಕ್ಕೆ ತೆರಳುವ ತಿರುವು ರಸ್ತೆಯಲ್ಲಿರುವ ಅಂಗಡಿಯೊಂದರ ಜಗುಲಿಯಲ್ಲಿ ವೃದ್ಧರು ಅಸ್ವಸ್ಥರಾಗಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ನಿತ್ಯಾನಂದ ಒಳಕಾಡು ಅವರು ಅಸ್ವಸ್ಥ ವೃದ್ಧರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.