
ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ನಿಟ್ಟಡೆ, ವೇಣೂರು ಇಲ್ಲಿ ದಿನಾಂಕ 15-11-2026ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ (Old student Association) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಸಮ್ಮೇಳನದಲ್ಲಿ 1996ರಿಂದ 2026ರವರೆಗೆ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸಂಸ್ಥೆಯೊಂದಿಗಿನ ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಲು, ಹಳೆಯ ಸ್ನೇಹಿತರೊಂದಿಗೆ ಮತ್ತೊಮ್ಮೆ ಒಂದಾಗಿ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಲು ಇದೊಂದು ಸುಂದರ ಅವಕಾಶವಾಗಿದೆ.
ಆದ್ದರಿಂದ ಕುಂಭಶ್ರೀಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ನೇಹ ಸಮ್ಮಿಲನದಲ್ಲಿ ಭಾಗವಹಿಸಿ,ಅದೇ ರೀತಿ, ದಿನಾಂಕ 05-12-2026ರಂದು ಸಂಸ್ಥೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ “ನಮ್ಮೂರ ಜಾತ್ರೆ – ಕುಂಭಶ್ರೀ ವೈಭವ” ಕಾರ್ಯಕ್ರಮವು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ. ಎಚ್., ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಸಮಸ್ತ ಶಿಕ್ಷಕ ವೃಂದದವರು ಆತ್ಮೀಯವಾಗಿ ಆಹ್ವಾನಿಸುತ್ತಿದ್ದಾರೆ.
