ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಹಕ್ಕೋತ್ತಾಯ ಸಭೆಗೆ- ಕಾಂಗ್ರೆಸ್ ಬೆಂಬಲ

0
8

ಕಾರ್ಕಳ ವಕೀಲರ ಸಂಘದ ವತಿಯಿಂದ ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಇದು ಕೇವಲ ವಕೀಲರಿಗೆ ಮಾತ್ರ ಸಂಬಂಧಿಸಿದ ವಿಷಯವಲ್ಲ ಸಮಸ್ತ ಕರಾವಳಿಯ ಜನತೆಗೆ ಸಹಕಾರಿಯಾಗುವ ಮಹತ್ವದ ವಿಚಾರವಾಗಿದೆ ಹಾಗಾಗಿ ಕಾರ್ಕಳ ವಕೀಲರ ಸಂಘದ ವತಿಯಿಂದ ನಡೆಯುವ ಹಕ್ಕೋತ್ತಾಯ ಸಭೆಗೆ ಸಂಪುರ್ಣ ಬೆಂಬಲವಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದ್ದಾರೆ

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ಈ ಭಾಗದ ಜನರು ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆ ತಪ್ಪುತ್ತದೆ. ಅಲ್ಲದೆ ಸಮಯ ಹಾಗೂ ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಪ್ರಯಾಣ ವೆಚ್ಚವೂ ಗಣನೀಯವಾಗಿ ಕಡಿಮೆಯಾಗಲಿದೆ.

ಈ ಮಹತ್ವದ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಹಕ್ಕೊತ್ತಾಯ ಸಭೆಯನ್ನು ದಿನಾಂಕ14 ಶನಿವಾರ ಬೆಳಿಗ್ಗೆ 10:30 ಕ್ಕೆ ಪ್ರಕಾಶ್ ಹೋಟೆಲ್‌ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಸಭೆಯಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.