ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ದಿ. ನಾರಾಯಾಣಾಚಾರ್ ದತ್ತಿ ನಿಧಿ ಕಾರ್ಯಕ್ರಮ

0
9

ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘ ಸುರತ್ಕಲ್ – ಇವರ ವತಿಯಿಂದ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆ ಸುರತ್ಕಲ್ ಇವರ ಸಹಕಾರದೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ದಿ. ನಾರಾಯಣಾಚಾರ್ ದತ್ತಿ ನಿಧಿ ಕಾರ್ಯಕ್ರಮವು ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ಜರುಗಿತು.

ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣ್ಣಗುಡ್ಡೆ ಗುರ್ಜಿ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕೃಷ್ಣಮೂರ್ತಿ ರಾವ್ ಮಾತನಾಡಿ “ನಾರಾಯಣಚಾರ್ ರವರ ಶಿಸ್ತು, ಪ್ರಾಮಾಣಿಕತೆ, ಸೇವಾ ಮನೋಭಾವ ನಮಗೆಲ್ಲರಿಗೂ ಸ್ಫೂರ್ತಿದಾಯಕ.

ಇವರ ಈ ಸವಿನೆನಪಿಗಾಗಿ ಹಳೆ ವಿದ್ಯಾರ್ಥಿಗಳು ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ” ಎಂದು ಹೇಳಿದರು. ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಶ್ರೀ ಹರೀಶ್ ಪೇಜಾವರ್, ಬೋಳೂರ್ ಸಾವಿತ್ರಿ ವಾಸುದೇವ ರಾವ್ ಚಾರಿಟೇಬಲ್ ಟ್ರಸ್ಟ್ ಅಶೋಕನಗರ ಮಂಗಳೂರು ಇದರ ನಿರ್ದೇಶಕ ಬಾಲಕೃಷ್ಣ ಹೆ ಚ್ ಇವರೂ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ್ದರು.

ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹೆಚ್ ವಿ ರಾಘವೇಂದ್ರ, ಶಾಲಾ ಸಂಚಾಲಕ ವಿಶ್ವರಾಜ್ ಇಡ್ಯಾ, ಶಾಲಾ ಪ್ರಾಂಶುಪಾಲ ಶಶಿಕುಮಾರ್ ಕೆ ಸಿ ಹಾಗೂ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ವಿದ್ಯಾದಾಯಿನೀ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪೂರ್ಣಿಮಾ ಸ್ವಾಗತಿಸಿ, ಕುಮಾರಿ ಮೋಹಿತ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಎಸ್ ವಂದಿಸಿದರು.