ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ ಪಾಲ್ ಸುವರ್ಣ

0
5

ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ ಸುಮಾರು 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ರಸ್ತೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ವ್ಯವಸ್ಥಿತ ರಸ್ತೆ ಸಂಪರ್ಕ ಜನ ಜೀವನಕ್ಕೆ ಅನುಕೂಲದ ಜೊತೆಗೆ ಗ್ರಾಮದ ಅಭಿವೃದ್ಧಿಗೆ ವೇಗ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

ಬಿಜೆಪಿ ಮುಖಂಡರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ ಹೇರೂರು ಪ್ರಧಾನ ನಗರ ಜನತೆಯ ಬಹು ವರ್ಷಗಳ ಬೇಡಿಕೆಗೆ ಶಾಸಕ ಯಶ್ ಪಾಲ್ ಸುವರ್ಣ ಸ್ಪಂದಿಸಿ 50 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ ಎಂದರು.

ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಮನೋಜ್ ಶೆಟ್ಟಿ , ಪಕ್ಷದ ಪ್ರಮುಖರಾದ ವೀಣಾ ನಾಯ್ಕ್, ಮೀರಾ ಸದಾನಂದ, ಹೇಮಾ ಅಶೋಕ್, ಶೈಲಜಾ, ರವಿ ಬೈಕಾಡಿ, ದಿನೇಶ್ ಶೆಟ್ಟಿ ಕೆಂಜೂರು, ಸಂತೋಷ್ ಜತ್ತನ್, ಗಿರೀಶ್ ಅಡಿಗ, ನಿತ್ಯಾನಂದ ನಾಯ್ಕ್, ದಿನೇಶ್ ಶೆಟ್ಟಿ ಹೇರೂರು, ಸುಶಾಂತ್ ಎಸ್. ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.