ಉಚ್ಚಿಲದಲ್ಲಿ ಭೀಕರ ಅಪಘಾತ: ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

0
2

ಕಾಪು: ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬಸ್ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಪಾದಚಾರಿ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.