ಧಾರವಾಡ: ನಾಟ್ಯಸ್ಫೂರ್ತಿ ವತಿಯಿಂದ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ–2026 ಹಾಗೂ ಕರುನಾಡ ಸಾಧನಶ್ರೀ ಪ್ರಶಸ್ತಿ–2026 ಕಾರ್ಯಕ್ರಮವನ್ನು ನವೆಂಬರ್ 15ರಂದು ಧಾರವಾಡದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಿಕಾರಿಪುರದ ಜಾನಪದ ಕಲಾವಿದ ಡಾ. ಸಿ.ಆರ್. ಪರಶುರಾಮ ಚೌಟಗಿ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಲಾವಿದರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

