ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಮುಂಭಾಗ ಸಂಪೂರ್ಣ ಜಖಂ

0
32

ಬೆಳ್ತಂಗಡಿ : ಪಡಂಗಡಿ ಗ್ರಾಮದ ಪೋಯೆಗುಡ್ಡೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ವೇಣೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ.

ವಿಷ್ಣುಮೂರ್ತಿ ದೇವಸ್ಥಾನ ಪೇರೋಡಿತಾಯ ಕಟ್ಟೆಯ ಅರ್ಚಕರಾದ ವಿಷ್ಣು ಸಂಪಿಗೀತಾಯ ಹಾಗೂ ಅವರ ಪತ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.