ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಸಂಘದ ಆಡಳಿತ ಕಚೇರಿ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ಸತೀಶ್ ಅಬ್ಬನಡ್ಕ, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರದೀಪ್ ಸುವರ್ಣ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಅಶ್ವಿನಿ ಬೋಳ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ, ಯೋಗೀಶ್ ಆಚಾರ್ಯ, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ವೀಣಾ ಪೂಜಾರಿ, ಅನ್ನಪೂರ್ಣ ಕಾಮತ್, ತ್ರಿವೇಣಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
