ಉಜಿರೆ : ಕಾರ್ಕಳದಲ್ಲಿ 2027ರ ಫೆಬ್ರವರಿ 18ರಿಂದ 28ರವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ದಕ್ಷಿಣ ಕನ್ನಡ ಜೈನ ಯುವಜನ ಸಂಘದ ಆಶ್ರಯದಲ್ಲಿ ನಾಳೆ (ಶನಿವಾರ) ಉಜಿರೆಯಲ್ಲಿ ರಾಷ್ಟ್ರಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ.
ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜೈನ ಯುವಜನ ಸಂಘದ ಅಧ್ಯಕ್ಷ ರಂಜಿತ್ ಕೆ. ಪಡಿವಾಳ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ಕುಮಾರ್ ಜೈನ್, ಉಜಿರೆಯ ಪೂರನ್ವರ್ಮ, ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ಸನ್ಮತಿಕುಮಾರ್, ನೋಟರಿ ಶಶಿಕಿರಣ್ ಜೈನ್, ಧೀಮತಿ ಮಹಿಳಾ ಸಮಾಜದ ಅಧ್ಯಕ್ಷೆ ಅಶ್ವಿನಿ ಪ್ರವೀಣಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ₹15,000 ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನವಾಗಿ ₹10,000 ಹಾಗೂ ಶಾಶ್ವತ ಫಲಕ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ನವೀನ್ ಜೈನ್ (ಮೊ. 9964073856) ಅವರನ್ನು ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ರಂಜಿತ್ ಕೆ. ಪಡಿವಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
