ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ತೇಜಸ್ವಿ ರಾಜ್ ನೇಮಕ

0
20

ಮಂಗಳೂರು : ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಮಂಗಳೂರಿನ ತೇಜಸ್ವಿ ರಾಜ್ ಅವರು ನೇಮಕಗೊಂಡಿದ್ದು, ಅವರ ಆಯ್ಕೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

NSUI ಹಾಗೂ ಯುವ ಕಾಂಗ್ರೆಸ್ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ತೇಜಸ್ವಿ ರಾಜ್ ಅವರು ಹಲವು ವರ್ಷಗಳಿಂದ ಸಂಘಟನೆಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ಅವರು, ಕುಲಾಲ ಸಮುದಾಯದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರದಿಂದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವುದು ಸಂತಸದ ವಿಚಾರವಾಗಿದ್ದು, ಅವರ ಈ ಆಯ್ಕೆಗೆ ಸ್ನೇಹಿತರು, ಹಿತೈಷಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಜವಾಬ್ದಾರಿಗಳು ಅವರನ್ನು ಅರಸಿ ಬರಲಿ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವಂತಾಗಲಿ ಎಂದು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.), ಮಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷರು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.