ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿಯಿಂದ ನ.14ರಿಂದ ಸಹಕಾರ ಸಪ್ತಾಹ ಸಂಭ್ರಮ

0
23

ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿ. ವತಿಯಿಂದ 2026ನೇ ಸಾಲಿನ ಸಹಕಾರ ಸಪ್ತಾಹದ ಅಂಗವಾಗಿ ನವೆಂಬರ್ 14ರಿಂದ 20ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಹಕಾರ ಸಪ್ತಾಹ ಸಂಭ್ರಮದ ಪ್ರಯುಕ್ತ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ, ಸಪ್ತಸಂಧ್ಯಾ – ಸಹಕಾರಿ ಚಿಂತನ ಸರಣಿ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆಯಲಿವೆ.

ಮೂಡುಬಿದಿರೆಯ ಕಲ್ಪವೃಕ್ಷ ಸಭಾಭವನದಲ್ಲಿ ಪ್ರತಿದಿನ ಸಂಜೆ 6 ಗಂಟೆಗೆ ಕಾರ್ಯಕ್ರಮಗಳು ಜರುಗಲಿವೆ. ಸಹಕಾರ ಕ್ಷೇತ್ರದ ಚಿಂತನೆ, ಸಾಧಕರಿಗೆ ಗೌರವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಸ್ಥೆ ಸಿದ್ಧತೆ ನಡೆಸಿದೆ.

ಸಹಕಾರ ಕ್ಷೇತ್ರದ ಸದಸ್ಯರು, ಸಾರ್ವಜನಿಕರು ಹಾಗೂ ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.