ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ವಿವೇಕಾನಂದ ಕಾಲೇಜಿನ ಮನ್ಮಿತಾ ರಾಜ್ಯಮಟ್ಟಕ್ಕೆ ಆಯ್ಕೆ

0
12

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ವತಿಯಿಂದ ಮಾಲೆಮಾರ್ ಎಸ್ಟೇಟ್‌ನ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಮನ್ಮಿತಾ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಆತ್ಮಿಕ ಅವರು ತಂಡವನ್ನು ಪ್ರತಿನಿಧಿಸಿದ್ದರು. ಇವರಲ್ಲಿ ಉತ್ತಮ ಪ್ರದರ್ಶನ ನೀಡಿದ ಮನ್ಮಿತಾ ಅವರು ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ತರಬೇತಿ ಪಡೆದಿದ್ದರು.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.