ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 27ನೇ ವರ್ಷಾಚರಣೆ ಅಂಗವಾಗಿ ವಾಯ್ಸ್ ಆಫ್ ಆರಾಧನಾ ಪ್ರತಿಭೆಗಳಿಂದ ನವೆಂಬರ್ 29ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಲಿರುವ ರಾಜ್ಯಮಟ್ಟದ ಮಕ್ಕಳ ಹಬ್ಬದ ಪೂರ್ವಭಾವಿ ಸಭೆ ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ರಾಜ್ಯಮಟ್ಟದ ಮಕ್ಕಳ ಹಬ್ಬದ ಸಂಯೋಜಕರು ಹಾಗೂ ಸಂಘದ ಪೂರ್ವಾಧ್ಯಕ್ಷರಾದ ಸತೀಶ್ ಅಬ್ಬನಡ್ಕ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಹುಮುಖ ಪ್ರತಿಭೆಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ವಿವಿಧ ರೀತಿಯ ಜಾನಪದ, ಯಕ್ಷಗಾನ ನೃತ್ಯ, ಸಂಗೀತ ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯ ವೇದಿಕೆಯಲ್ಲಿ ಪ್ರದರ್ಶಿಸಲಿದ್ದಾರೆ. ಈ ನಿಟ್ಟಿನಲ್ಲಿ ಬೆಳಿಗ್ಗೆ ನಡೆಯಲಿರುವ ಮೆರವಣಿಗೆ, ಸಭಾ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮಗಳ ಸಿದ್ಧತೆ ಕುರಿತು ಮಾತನಾಡಿದರು.
ಕಾರ್ಯಕ್ರಮದ ಮಹಾನಿರ್ದೇಶಕರನ್ನಾಗಿ ಸುರೇಶ್ ಕಾಸರಬೈಲು, ಸಹ ನಿರ್ದೇಶಕರಾಗಿ ವೀಣಾ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ವಿವಿಧ ಜವಾಬ್ದಾರಿಯುತ ಸಮಿತಿಯನ್ನು ರಚಿಸಿ ಜವಾಬ್ದಾರಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರದೀಪ್ ಸುವರ್ಣ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಅಶ್ವಿನಿ ಬೋಳ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ, ಯೋಗೀಶ್ ಆಚಾರ್ಯ, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ಅನ್ನಪೂರ್ಣ ಕಾಮತ್, ತ್ರಿವೇಣಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

