ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್‌. ವಸಂತ ಬೆರ್ನಾಡ್ ರಿಗೆ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರ

0
15

ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್‌. ವಸಂತ ಬೆರ್ನಾಡ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದು, ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಸಹಕಾರಿಗಳು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಎಚ್. ವಸಂತ ಬೆರ್ನಾಡ್ ರವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಸಹಕಾರ ಸಂಘ (ನಿ.),ದ ಅಧ್ಯಕ್ಷರು. ಹಾಗೂ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾಗಿ ಸುಧೀರ್ಘ 31 ವರ್ಷಗಳಿಂದ ನಿರ್ದೇಶಕರಾಗಿದ್ದಾರೆ 2021ರಲ್ಲಿ ಹಳೆಯಂಗಡಿಯಲ್ಲಿ ಪ್ರಿಯದರ್ಶಿನಿ ಸಹಕಾರ ಸಂಘವನ್ನು ಸ್ಥಾಪಿಸಿ ಅತ್ಯಲ್ಪ ಅವಧಿಯಲ್ಲೇ ಉಭಯ ಜಿಲ್ಲೆಗಳಲ್ಲಿ ಗುರುತಿಸಲ್ಪಟ್ಟ ಪ್ರಗತಿಪರ ಸಹಕಾರಿ ಸಂಸ್ಥೆಯಾಗಿ ರೂಪಿಸಿದ್ದಾರೆ.

ನವೆಂಬ‌ರ್ 14 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಎಚ್ ವಸಂತ್ ಬೆರ್ನಾಡ್ ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು,ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹಾಗೂ ಮತ್ತಿತರರು ಅಭಿನಂದಿಸಿದ್ದಾರೆ.