“ಮನುಷ್ಯ ತನ್ನ ಜೀವನದಲ್ಲಿ ಏನಾದರೂ ದೊಡ್ಡ ಸಾಧನೆ ಮಾಡಬೇಕು. ಅದಕ್ಕೆ ಪ್ರೊ. ಕೊಣ್ಣೂರು ಅವರೇ ಜೀವಂತ ಉದಾಹರಣೆ” – ಬಸವರಾಜ ಹೊರಟ್ಟಿ
ಬೆಂಗಳೂರು : ಮನುಷ್ಯ ತನ್ನ ಜೀವನದಲ್ಲಿ ಏನಾದರೂ ದೊಡ್ಡ ಸಾಧನೆ ಮಾಡಬೇಕು. ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುವ ಮೂಲಕ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರೊ. ಪಿ.ವಿ. ಕೊಣ್ಣೂರು ಅವರು ಎಲ್ಲರಿಗೂ ಜೀವಂತ ಉದಾಹರಣೆಯಾಗಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಪಿ.ವಿ. ಕೊಣ್ಣೂರು ಸನ್ಮಾನ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಪ್ರೊ. ಪಿ.ವಿ. ಕೊಣ್ಣೂರು ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಾಗೂ ತಮ್ಮ ವೃತ್ತಿಜೀವನದ ಮೂಲಕ ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿರುವ ಪ್ರೊ. ಕೊಣ್ಣೂರು ಅವರ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಗಣ್ಯರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್. ಹೊರಟ್ಟಿ ಸೇರಿದಂತೆ ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಪ್ರೊ. ಕೊಣ್ಣೂರು ಅವರನ್ನು ಅಭಿನಂದಿಸಿದರು.
ಸಾಧನೆ, ಸೇವೆ ಮತ್ತು ಸರಳ ವ್ಯಕ್ತಿತ್ವದ ಮೂಲಕ ಸಮಾಜದಲ್ಲಿ ವಿಶಿಷ್ಟ ಸ್ಥಾನ ಗಳಿಸಿರುವ ಪ್ರೊ. ಪಿ.ವಿ. ಕೊಣ್ಣೂರು ಅವರಿಗೆ ಈ ಅಭಿನಂದನಾ ಸಮಾರಂಭ ಗೌರವದ ಕಿರೀಟವಾಯಿತು ಎಂದು ಬೆಂಗಳೂರು ವಿಕಾಸ ಕಾರ್ಯದರ್ಶಿ ಹನುಮೇಶ ಯಾವಗಲ್ ಪತ್ರಿಕೆಯೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ

