ಮಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ : ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ!

0
29

ಮಂಗಳೂರು: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದು, ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದ ಪೊಲೀಸ್ ತಂಡ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಇಬ್ಬರನ್ನೂ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ, ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.

ಈ ಪೊಲೀಸ್ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ. ಮತ್ತು ಜ್ಞಾನಶೇಖರ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.