ಉಡುಪಿ : ಗೋಳಿಚಾವಡಿ ಕುಕ್ಕಿಕಟ್ಟೆಯ 9ನೇ ಬ್ಲಾಕ್ ಗುರುನಗರ, ಕೃಷ್ಣಾಪುರ ಮಧ್ಯದಲ್ಲಿರುವ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ವತಿಯಿಂದ ನವೆಂಬರ್ 29ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9 ಗಂಟೆಗೆ ಗಣಹೋಮ ನಡೆಯಲಿದ್ದು, ಸಂಜೆ 5 ಗಂಟೆಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದೆ. ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 9 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ರಾತ್ರಿ 10 ಗಂಟೆಗೆ ಶ್ರೀ ವಿಜಯ ಕಲಾವಿದರು ಕಿನ್ನಿಗೋಳಿ ತಂಡದ ವತಿಯಿಂದ ಶರತ್ ಶೆಟ್ಟಿ ಅವರ ನೇತೃತ್ವದಲ್ಲಿ ಹರೀಶ್ ಪಡುಬಿದ್ರಿ ಅವರ ರಚನೆಯ ‘ಮನಿಪಂದೆ ಕುಲ್ಲಡೆ’ ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತರು, ಊರಿನ ನಾಗರಿಕರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ವಿನಂತಿಸಿದೆ.
