ಸಜಿಪ ಮಾಗಣೆ ಮಿತ್ತ ಮಜಲು ಕ್ಷೇತ್ರದಲ್ಲಿ ಸಾಮೂಹಿಕ ಬಲಿಂದ್ರ ಪೂಜೆ ಸಂಪನ್ನ

0
23

ಬಂಟ್ವಾಳ : ದೀಪಾವಳಿ ಹಬ್ಬದ ಪ್ರಯುಕ್ತ ಸಜಿಪ ಮಾಗಣೆ ಮಿತ್ತ ಮಜಲು ಕ್ಷೇತ್ರದಲ್ಲಿ ಸಾಮೂಹಿಕ ಬಲಿಂದ್ರ ಪೂಜೆಯು ಧಾರ್ಮಿಕ ಶ್ರದ್ಧಾಭಕ್ತಿಯಿಂದ ನೆರವೇರಿತು.

ಸಜಿಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ಜರುಗಿದವು. ಕ್ಷೇತ್ರದ ಸಂಪ್ರದಾಯದಂತೆ ನಡೆದ ಸಾಮೂಹಿಕ ಬಲಿಂದ್ರ ಪೂಜೆಯಲ್ಲಿ ಭಕ್ತರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಡದಾರು ಗುತ್ತು ಗಡಿ ಪ್ರಧಾನರಾದ ಶಶಿಧರ ರೈ ಯಾನೆ ನಾ ರಾಣಿ ಆಳ್ವ, ಪಂಚಾಯತ್ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.