ಮಂಗಳಾದೇವಿ ದೇವಸ್ಥಾನದ ಬಳಿ ಮಹಿಳೆಯ ಕರಿಮಣಿ ಸರ ಎಳೆದು ಪರಾರಿ

0
8

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರವನ್ನು ಬೈಕ್‌ನಲ್ಲಿ ಬಂದ ಅಪರಿಚಿತರು ಎಳೆದು ಪರಾರಿಯಾಗಿರುವ ಘಟನೆ ನಡೆದಿದೆ.

ಚಿನ್ನದ ಕರಿಮಣಿ ಸರ ತಾಳಿ ಸಹಿತ 15 ಗ್ರಾಂ ತೂ ಇದ್ದು, ಇದರ ಬೆಲೆ 1,50,00 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಪ್ಪು ಗರೋಡಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಸುಜಾತಾ ಸಿ ಪಾಟೀಲ್‌ ಕರಿಮಣಿ ಸರ ಕಳೆದುಕೊಂಡವರು.

ಬೈಕ್‌ ಚಲಾಯಿಸುತ್ತಿದ್ದ ವ್ಯಕ್ತಿ ಮುಖಕ್ಕೆ ಮಾಸ್ಕ್‌ ಹಾಕಿದ್ದು, ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ. ಘಟನೆಯಲ್ಲಿ ಕುತ್ತಿಗೆಗೆ ತರಚಿದ ಗಾಯ ಹಾಗೂ ಕುತ್ತಿಗೆಯ ಬಲಭಾಗದಲ್ಲಿ ನೋವುಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.