ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ನಿರ್ದೇಶಕರಾಗಿ ಶಶಿಕಲಾ ಆಯ್ಕೆ

0
7

ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಶಿಕಲಾ ಅವರಿಗೆ ವಿವಿಧ ಸಂಘಟನೆಗಳು ಹಾಗೂ ಹಿತೈಷಿಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.

ಫಲಾಪೇಕ್ಷೆಯಿಲ್ಲದೆ ಜನಸೇವೆಯೇ ಜನಾರ್ದನ ಸೇವೆ ಎಂಬ ಧ್ಯೇಯದೊಂದಿಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಶಶಿಕಲಾ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಅಲ್ಲದೆ, ವಿಶ್ವ ತುಳುವೆರ್ (ರಿ.) ಸಂಘಟನೆಯ ಜಿಲ್ಲಾ ಮಹಿಳಾ ಕಾರ್ಯಾಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಪಕ್ಷ ಹಾಗೂ ಸಮಾಜಕ್ಕಾಗಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ದೊರೆತಿರುವ ಈ ಜವಾಬ್ದಾರಿಗೆ ಹಿತೈಷಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆಗಳು ದೊರೆಯಲಿ ಹಾಗೂ ತುಳುನಾಡಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಂತಾಗಲಿ ಎಂದು ಶುಭ ಹಾರೈಸಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.