17 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಆರೋಪಿ ಕೊನೆಗೂ ಅಂದರ್!

0
1

ಉಪ್ಪಿನಂಗಡಿ : ದರೋಡೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಚಿಕ್ಕಮಗಳೂರಿನ ಮಸೂದ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 187/2006ರ ಕಲಂ 395 ಮತ್ತು 397 ಐಪಿಸಿ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು SC 52/2008ರ ವಿಚಾರಣೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿತ್ತು.

ಈ ಆದೇಶದ ವಿರುದ್ಧ ಆರೋಪಿ ಹೈಕೋರ್ಟ್‌ನಲ್ಲಿ Crl. Appeal No.443/2015ರ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಿದ್ದರೂ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಹೈಕೋರ್ಟ್ ಆದೇಶದ ಮೇರೆಗೆ ಸಿಪಿಐ ನಾಗರಾಜ್ ಹೆಚ್.ಇ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಸುತೇಶ್ ಕೆ.ಪಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ನವೆಂಬರ್ 13ರಂದು ಎನ್.ಆರ್.ಪುರದಲ್ಲಿ ಆರೋಪಿಯನ್ನು ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ನಂಜುಂಡಯ್ಯ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮ್ಯಾಥ್ಯೂಸ್ ಭಾಗವಹಿಸಿದ್ದರು. ಬಂಧಿತನನ್ನು ಪುತ್ತೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಮಂಗಳೂರು ಕಾರಾಗೃಹಕ್ಕೆ ಕಳುಹಿಸಲಾಗಿದೆ.