ಕೇರಳ-ಕರ್ನಾಟಕದ ಕವಿಗಳಿಗೆ ಸುವರ್ಣಾವಕಾಶ: ನ. 28ರಂದು ಕವಿಗೋಷ್ಠಿ

0
10

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಇದರ ಆಶ್ರಯದಲ್ಲಿ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಸಹಯೋಗದಲ್ಲಿ ನವೆಂಬರ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026 ಆಯೋಜಿಸಲಾಗಿದೆ.

ಇದರ ಅಂಗವಾಗಿ ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಶತ ಕವಿಗೋಷ್ಠಿ ಏರ್ಪಡಿಸಲಾಗಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೇರಳ ಮತ್ತು ಕರ್ನಾಟಕ ರಾಜ್ಯಗಳ ಒಟ್ಟು 100 ಕವಿಗಳಿಗೆ ತಮ್ಮ ಸ್ವರಚಿತ ಕವನಗಳನ್ನು ವಾಚಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಪತ್ರದ ಮೂಲಕ ಅಥವಾ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿ ನೋಂದಾಯಿಸಿಕೊಳ್ಳಬಹುದು. ಕವನ ವಾಚಿಸಿದ ಕವಿಗಳಿಗೆ ಪ್ರಮಾಣಪತ್ರ ಹಾಗೂ ಸಾಹಿತ್ಯ ಕೃತಿಗಳನ್ನು ನೀಡಿ ಗೌರವಿಸಲಾಗುವುದು.

ಕವಿಗಳು ಕಾರ್ಯಕ್ರಮದ ದಿನ ಬೆಳಿಗ್ಗೆ 10 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕವಿಗಳಿಗೆ ಯಾವುದೇ ಪ್ರಯಾಣ ವೆಚ್ಚವನ್ನು ನೀಡಲಾಗುವುದಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಪರ್ಕ ವಿವರ:

ಶಿವರಾಮ ಕಾಸರಗೋಡು
ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಮೀಪುಗುರಿ–ಪಾರೆಕಟ್ಟೆ ರಸ್ತೆ, ಕಾಸರಗೋಡು–671121.

📞 ಮೊಬೈಲ್: 9448572016