ಕುಟುಂಬ ಸಮೇತರಾಗಿ ನವ ಚಂಡಿಯಾಗದಲ್ಲಿ ಭಾಗಿ
ಉಡುಪಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನದಲ್ಲಿ ನಡೆಯುತ್ತಿರುವ ನವ ಚಂಡಿಯಾಗದಲ್ಲಿ ಅವರು ಭಾಗವಹಿಸಿ ದೇವಿಯ ದರ್ಶನ ಪಡೆದರು.ಕುಮಾರಸ್ವಾಮಿ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ ,ಪುತ್ರ ನಿಖಿಲ್ ಕುಮಾರಸ್ವಾಮಿ ಯಾಗದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ತಂತ್ರಿಗಳಾದ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಇದಕ್ಕೂ ಮುನ್ನ ಕುಮಾರಸ್ವಾಮಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು. ಸ್ಥಳೀಯ ಮುಖಂಡರಾದ ಯೋಗೀಶ್ ಹಾಗೂ ಮನ್ಸೂರ್ ಮರವಂತೆ ಉಪಸ್ಥಿತರಿದ್ದರು.

