ಮಾಹೆ ಘಟಿಕೋತ್ಸವದ ಕುರಿತು ನ.17ರಂದು ಪತ್ರಿಕಾಗೋಷ್ಠಿ

0
10

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ 2026ನೇ ಸಾಲಿನ ಘಟಿಕೋತ್ಸವ ಕಾರ್ಯಕ್ರಮದ ಕುರಿತು ನವೆಂಬರ್ 17ರಂದು ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 12.15ರಿಂದ ಮಾಹೆ ಮಣಿಪಾಲದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದ್ದು, ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಹ್ವಾನ ನೀಡಲಾಗಿದೆ.

ಪತ್ರಿಕಾಗೋಷ್ಠಿಗೆ ಆಗಮಿಸುವ ಪತ್ರಕರ್ತರ ಅನುಕೂಲಕ್ಕಾಗಿ ಮಧ್ಯಾಹ್ನ 11.55ಕ್ಕೆ ಪತ್ರಿಕಾ ಭವನದಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಪತ್ರಿಕಾಗೋಷ್ಠಿಯ ಬಳಿಕ ಭೋಜನಕೂಟವನ್ನೂ ಆಯೋಜಿಸಲಾಗಿದ್ದು, ಎಲ್ಲ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಮಾಹೆ ವತಿಯಿಂದ ಆಹ್ವಾನಿಸಲಾಗಿದೆ.