ವಿದ್ಯೆ – ಕ್ರೀಡಾ ಕ್ಷೇತ್ರಕ್ಕೆ ಸಮಾನ ಪ್ರೋತ್ಸಾಹ: ಗಿರೀಶ್ ಪಿ.ವಿ.

0
9

90 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಸಂಭ್ರಮದಿಂದ ಜರುಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಭರತೇಶ್ ಬಂಗೇರ ಅವರು, ಹಳೆ ವಿದ್ಯಾರ್ಥಿಗಳ ಕ್ರೀಡಾ ಮನೋಭಾವನೆ ಹಾಗೂ ಉತ್ಸಾಹವನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿರಾಟ್ ಸುರತ್ಕಲ್‌ನ ಕಾರ್ಯದರ್ಶಿ ಗಿರೀಶ್ ಪಿ.ವಿ. ಅವರು ಮಾತನಾಡಿ, “ಹಿಂದೂ ವಿದ್ಯಾದಾಯಿನೀ ಸಂಘದ ಶಿಕ್ಷಣ ಸಂಸ್ಥೆಗಳು ವಿದ್ಯೆಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ವಿದ್ಯಾದಾಯಿನೀ ಸ್ಪೋರ್ಟ್ಸ್ ಅಕಾಡೆಮಿಯ ಮೂಲಕ ಕ್ರೀಡಾ ತರಬೇತಿಗೂ ನೀಡುತ್ತಿವೆ. ಈ ಸೌಲಭ್ಯದ ಪ್ರಯೋಜನವನ್ನು ಶಾಲಾ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಆಸಕ್ತ ಕ್ರೀಡಾಪಟುಗಳು ಪಡೆದುಕೊಂಡು ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು” ಎಂದರು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ. ಅತಿಥಿಗಳನ್ನು ಸ್ವಾಗತಿಸಿ, ಎಲ್ಲರೂ ಕ್ರೀಡಾ ಸ್ಫೂರ್ತಿ ಹಾಗೂ ಸೌಹಾರ್ದತೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಕ್ರೀಡಾ ಸಂಯೋಜಕ ಭಾಸ್ಕರ್ ಐ. ಅವರು ಕ್ರೀಡಾಕೂಟದ ರೂಪುರೇಷೆ ಹಾಗೂ ವಿವಿಧ ಸ್ಪರ್ಧೆಗಳ ವಿವರಗಳನ್ನು ನೀಡಿದರು. ಉಪಾಧ್ಯಕ್ಷರಾದ ಸಾವಿತ್ರಿ ಎಚ್. ಭಟ್ ಹಾಗೂ ಉಮಾ ಜಿ. ಭಟ್ ಪ್ರಾರ್ಥಿಸಿದರು. ಜೊತೆ ಕಾರ್ಯದರ್ಶಿ ಶೋಭಾ ಆರ್. ರಾವ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರಕಾಶ್ ಕರ್ಕೇರ ವಂದಿಸಿದರು.

ಈ ಸಂದರ್ಭದಲ್ಲಿ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ಶಶಿಕುಮಾರ್ ಕೆ.ಸಿ., ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಹರೀಶ್ ಆಚಾರ್ಯ, ಸಂಘದ ಕಾರ್ಯದರ್ಶಿ ಶ್ರೀನಿವಾಸ ಕುಳಾಯಿ, ಕೆ. ಕಲಾವತಿ, ಪಿ. ಕಸ್ತೂರಿ, ವಿದ್ಯಾದಾಯಿನೀ ಸ್ಪೋರ್ಟ್ಸ್ ಅಕಾಡೆಮಿಯ ಸುಬ್ರಮಣ್ಯ ಟಿ., VOSA ನ ನಿಕಟಪೂರ್ವ ಕಾರ್ಯದರ್ಶಿ ರಾಕೇಶ್ ಎಚ್. ಸೇರಿದಂತೆ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.