ಕ್ರಾಸ್ ವೈಭವ ಸಾಂಸ್ಕೃತಿಕ ಉತ್ಸವದಲ್ಲಿ ನಿಖಿತಾಗೆ ಪ್ರಥಮ ಬಹುಮಾನ

0
10

ಬ್ರಹ್ಮಾವರ: ಕ್ರಾಸ್‌ಲ್ಯಾಂಡ್ ಕಾಲೇಜಿನಲ್ಲಿ ನಡೆದ 2026ನೇ ಸಾಲಿನ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ‘ಕ್ರಾಸ್ ವೈಭವ’ದಲ್ಲಿ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿಖಿತಾ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.