ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಮಕ್ಕಳ ದಿನಾಚರಣೆ – ಭಾಷಣ ಸ್ಪರ್ಧೆ

0
7

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದಲ್ಲಿ ಭಾರತದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನಾಚರಣೆ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಸಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಕಾರ್ಯಕ್ರಮ ನಡೆಸಲಾಯಿತು.

ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರು ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರ ಮಾಲಾರ್ಪಣೆಗೈದು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಕಾರ್ಯದರ್ಶಿ ಸುಭಾಷ್ ಕುಮಾರ್, ಭಜನಾ ಮಂಡಳಿಯ ಗೌರವಾಧ್ಯಕ್ಷ ರಾಜೇಶ್ ಕೋಟ್ಯಾನ್, ಅಧ್ಯಕ್ಷೆ ಅಶ್ವಿನಿ ಬೋಳ, ಕಾರ್ಯದರ್ಶಿ ಹರ್ಷಲ್ ಪೂಜಾರಿ, ಸಂಘದ ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಪೂರ್ವಾಧ್ಯಕ್ಷ ಸುರೇಶ್ ಕಾಸರಬೈಲು, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರದೀಪ್ ಸುವರ್ಣ, ಸಂಘದ ಮಾಜಿ ಕಾರ್ಯದರ್ಶಿಗಳಾದ ಲಲಿತಾ ಆಚಾರ್ಯ, ವೀಣಾ ಪೂಜಾರಿ ಸಂಘದ ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಭಜನಾ ಮಂಡಳಿಯ ಮಾಜಿ ಕಾರ್ಯದರ್ಶಿ ಶ್ರದ್ಧಾ ಪೂಜಾರಿ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.