ಸುಜ್ಞಾನ ಎಜುಕೇಷನಲ್ ಟ್ರಸ್ಟ್ ವತಿಯಿಂದ ನ.18ರಂದು ದೀಪಾವಳಿ ಸಂಪ್ರದಾಯದ ಸೊಗಡಿನಲ್ಲಿ ಬೆಳಗಿನ ಹಬ್ಬ

0
8

ಕುಂದಾಪುರ : ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಕೃಷಿ ಪರಂಪರೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ (ರಿ.) ಕುಂದಾಪುರ ವತಿಯಿಂದ ‘ಸುಜ್ಞಾನ ದೀಪಾವಳಿ – ಸಂಪ್ರದಾಯದ ಸೊಗಡಿನಲ್ಲಿ ಬೆಳಗಿನ ಹಬ್ಬ’ ಕಾರ್ಯಕ್ರಮವನ್ನು ನವೆಂಬರ್ 18ರಂದು ಬುಧವಾರ ಸಂಜೆ 6.30ರಿಂದ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ದೀಪಾವಳಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಗೋ ಪೂಜೆ, ತುಳಸಿ ಪೂಜೆ, ಬಲಿಂದ್ರ ಪೂಜೆ ಹಾಗೂ ಕೃಷಿ ಪರಿಕರಗಳ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಷನಲ್ ಟ್ರಸ್ಟ್ (ರಿ.) ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹೊಸನಗರ ತಾಲೂಕಿನ ಯಡೂರು ಸಮೂಹ ಸಂಪನ್ಮೂಲ ವ್ಯಕ್ತಿ ರೇಖಾ ಪ್ರಭಾಕರ್ ಭಾಗವಹಿಸಲಿದ್ದಾರೆ.

ಗೌರವ ಉಪಸ್ಥಿತರಾಗಿ ಸುಜ್ಞಾನ ಎಜುಕೇಷನಲ್ ಟ್ರಸ್ಟ್ (ರಿ.) ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತವನ್ನು ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕೋರಿದ್ದಾರೆ.