ಕೊಡವೂರು ವಾರ್ಡ್‌ನಲ್ಲಿ ನ.19ರಂದು ಉಚಿತ ಆರೋಗ್ಯ ಕಾರ್ಡ್ ವಿತರಣೆ

0
6

ಉಡುಪಿ : ಮುಖ್ಯಮಂತ್ರಿ ನಿಧಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಫಲಾನುಭವಿಗಳಿಗೆ ನೀಡಲಾಗುವ ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ನವೆಂಬರ್ 19ರಂದು ಸಂಜೆ 5.30ಕ್ಕೆ ಕೊಡವೂರು ಪಾಳೇಕಟ್ಟೆಯ ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದು, ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆ ಮಾಡಲಿದ್ದಾರೆ.

ಕೊಡವೂರು ವಾರ್ಡ್‌ನ ಸಾರ್ವಜನಿಕರು ಹಾಗೂ ಅರ್ಹ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ನಿಕಟಪೂರ್ವ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.