ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 25 ಮತ್ತು 26ರಂದು ನಡೆಯಲಿರುವ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಪ್ರಯುಕ್ತ ಎರಡನೇ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಅಕ್ಷೋಭ್ಯ ಸಭಾಭವನದಲ್ಲಿ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಾತ್ರಾಮಹೋತ್ಸವದ ಸಿದ್ಧತೆಗಳು, ವಿವಿಧ ಸೇವಾ ಕಾರ್ಯಗಳು ಹಾಗೂ ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ವೇದಿಕೆಯಲ್ಲಿ ಜಾತ್ರಾಮಹೋತ್ಸವದ ಪ್ರಧಾನ ಸಂಚಾಲಕಿ ಸರೋಜಿನಿ ಭೀಮಂಡೆ, ದೇವಸ್ಥಾನದ ಅಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುನ್ನಾಯ, ಬೆಳಾಲುಗುತ್ತು ಮನೆಯ ಹೇಮಲತಾ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಹಾಗೂ ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಬೈಲುವಾರು ಸಮಿತಿಗಳ ಸದಸ್ಯರು, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಸುಂದರ ಎಂ.ಕೆ., ಜಾರಪ್ಪ ಗೌಡ ಅರಣೆಮಾರು, ಬಾಬು ಆಚಾರ್ಯ, ಸೀತಾರಾಮ ಬಿ.ಎಸ್., ಶ್ರೀನಿವಾಸ ಗೌಡ ಗಣಪನಗುತ್ತು, ಶಿವಕುಮಾರ್ ಬಾರಿತ್ತಾಯ ಪಾರಳ, ಅನಂತೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಗಳ ಸಂಚಾಲಕರು, ಸಹಸಂಚಾಲಕರು ಹಾಗೂ ಸದಸ್ಯರು, ಅನಂತೇಶ್ವರ ಫ್ರೆಂಡ್ಸ್ ಪದಾಧಿಕಾರಿಗಳು, ಮಹಿಳಾ ಸಮಿತಿಯ ಸದಸ್ಯರು ಮತ್ತು ಊರಿನ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ವ್ಯವಸ್ಥಾಪನಾ ಸಮಿತಿಯ ಖಾಯಂ ಆಹ್ವಾನಿತ ಸದಸ್ಯ ಕಿರಣ್ ಸುವರ್ಣ ಇರಂತ್ಯಾರು ಸ್ವಾಗತಿಸಿದರು. ದೇವಸ್ಥಾನದ ಕಚೇರಿ ಮೇಲ್ವಿಚಾರಕ ಶಿವಪ್ರಸಾದ್ ಗೊಲ್ಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

