
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಮೆಚ್ಚಿ, ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ವ್ಯಕ್ತಪಡಿಸಿ ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಬಿಜು, ಶಿಜಿ ಮತ್ತು ಪೌಲೋಸ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ತಾಲೂಕು ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪಕ್ಷ ತೊರೆದಿರುವುದಾಗಿ ಅವರು ತಿಳಿಸಿದ್ದು, ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಗೌಡ, ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ., ಪುದುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಪೂರ್ಣಾಕ್ಷ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
