ದಾವಣಗೆರೆಯ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾದ ಆರ್. ರವಿಯವರಿಗೆ ಕಲಾಕುಂಚದಿಂದ ಸನ್ಮಾನ

0
8

ದಾವಣಗೆರೆಯ ಕನ್ನಡಿಗ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾದ ಕಾರಣ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿAದ ಸನ್ಮಾಯಿಸಿ ಗೌರವಿಸಲಾಯಿತು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರ ಕೂಟದ ಸಭಾಂಗಣದಲ್ಲಿ ಕಲಾಕುಂಚ ಗೌರವ ಅಧ್ಯಕ್ಷರಾದ ಕೆ.ಎಚ್.ಮಂಜುನಾಥ್, ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್, ಸಮಿತಿ ಸದಸ್ಯರಾದ ಶ್ರೀಮತಿ ಶಿಲ್ಪಾ ಉಮೇಶ್, ಚನ್ನಬಸವ ಶೀಲವಂತ್ ಮುಂತಾದವರು ಉಪಸ್ಥಿತರಿದ್ದರು.