ಸುಲ್ಕೇರಿಮೊಗ್ರು: ಹಿಂದೂ ಯುವಜನ ಸೇವಾ ಸಂಘ, ಸುಳ್ಕೇರಿಮೊಗ್ರು ಇದರ ದಶಮಾನೋತ್ಸವದ ಸಂಭ್ರಮ ಹಾಗೂ ಸಂಚಾರಿ ಚಿತಾಗಾರದ ಲೋಕಾರ್ಪಣೆ ಕಾರ್ಯಕ್ರಮ ನವೆಂಬರ್ 22ರಂದು ಭಾನುವಾರ ನಡೆಯಲಿದೆ.
ಸಂಘವು ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ ಹಲವಾರು ಸಮಾಜಮುಖಿ ಹಾಗೂ ಜನಪರ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದು, ದಶಮಾನೋತ್ಸವದ ಶುಭ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಸಾಮಾಜಿಕ ಸೇವೆಗೆ ಮುಂದಾಗಿದೆ.
ನವೆಂಬರ್ 22ರಂದು ಬೆಳಿಗ್ಗೆ 10.30ಕ್ಕೆ ಸುಳ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ದಶಮಾನೋತ್ಸವದ ಸಂಭ್ರಮದ ಜೊತೆಗೆ ಸಂಚಾರಿ ಚಿತಾಗಾರದ ಲೋಕಾರ್ಪಣೆ ಸಮಾರಂಭವೂ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಯುವಜನ ಸೇವಾ ಸಂಘದ ಅಧ್ಯಕ್ಷ ಅಶ್ವಥ್ ಸಾಲ್ಯಾನ್ ವಹಿಸಲಿದ್ದಾರೆ. ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಹತ್ತು ವರ್ಷಗಳ ಸಮಾಜಸೇವೆಯ ಪಯಣವನ್ನು ಸ್ಮರಿಸುವ ಈ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ತ ಹಿಂದೂ ಬಾಂಧವರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

