ನ. 24-25ರಂದು ಕಾಪುವಿನ ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ

0
7

ಕಾಪು: ತುಳುನಾಡಿನ ಪ್ರಸಿದ್ಧ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಕಾಪು ಜಾರ್ದೆ ಮಾರಿಪೂಜೆಯು ನವೆಂಬರ್ 24 ಮತ್ತು 25ರಂದು ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಲ್ಲಿ ವೈಭವದಿಂದ ನಡೆಯಲಿದೆ.
ಕಾಪುವಿನ ಹಳೆ ಶ್ರೀ ಮಾರಿಯಮ್ಮ ದೇವಸ್ಥಾನ, ಹೊಸ ಶ್ರೀ ಮಾರಿಗುಡಿ ದೇವಸ್ಥಾನ ಹಾಗೂ ಮೂರನೇ ಶ್ರೀ ಮಾರಿಯಮ್ಮ ದೇವಸ್ಥಾನಗಳಲ್ಲಿ ವರ್ಷಂಪ್ರತಿ ನಡೆಯುವ ಜಾರ್ದೆ ಮಾರಿಪೂಜೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಎರಡು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಉತ್ಸವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಲಿದ್ದು, ನಾಡಿನ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಭಕ್ತರು ದೇವಿಗೆ ಹೂವಿನ ಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಿ ಹರಕೆ ತೀರಿಸಲಿದ್ದಾರೆ.
ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಹೊಂದಿರುವ ಕಾಪು ಮಾರಿಪೂಜೆಯು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಈ ಸಂಭ್ರಮದಲ್ಲಿ ಊರ ಹಾಗೂ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲಿದ್ದಾರೆ.
ಎರಡು ದಿನಗಳ ಜಾರ್ದೆ ಮಾರಿಪೂಜೆಗೆ ಸರ್ವ ಭಕ್ತಾದಿಗಳಿಗೆ ಆದರದ ಸ್ವಾಗತ ಕೋರಲಾಗಿದೆ.