ಉಡುಪಿಯಲ್ಲಿ ನ.22ರಂದು ಬಹುಭಾಷಾ ಕವಿಗೋಷ್ಠಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಸಡಗರದ ಅಂಗವಾಗಿ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವನ್ನು ನವೆಂಬರ್ 22ರ ಭಾನುವಾರ ಆಯೋಜಿಸಲಾಗಿದೆ.
ಮಧ್ಯಾಹ್ನ 3.30ಕ್ಕೆ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ಐ .ವೈ .ಸಿ. ‘ವಿಶ್ವಪ್ರಭಾ’ ಹವಾನಿಯಂತ್ರಿತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡದ ಪ್ರಸಿದ್ಧ ವಿದ್ವಾಂಸರಾದ ಪ್ರೊ. ಎ.ವಿ. ನಾವಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ . ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ ವಿಶ್ವನಾಥ ಶೆಣೆೈ ಭಾಗವಹಿಸಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ರಂಗಪ್ಪಯ್ಯ ಹೊಳ್ಳ ವಹಿಸಲಿದ್ದು, ಕವಿಗೋಷ್ಠಿಯಲ್ಲಿ 21 ಮಂದಿ ಕವಿಗಳು ವಿವಿಧ ಭಾಷೆಗಳಲ್ಲಿ ತಮ್ಮ ಕವನಗಳನ್ನು ವಾಚಿಸಲಿದ್ದಾರೆ.
ಕವಿಗೋಷ್ಠಿಯ ಸಂಚಾಲಕರಾಗಿ ಜನಾರ್ದನ ಕೊಡವೂರು ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘಟಕರು ಕೋರಿದ್ದಾರೆ.

