ಉಚ್ಚಿಲದಲ್ಲಿ ನ.22ರಂದು ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ | ಪಂಚ ಗ್ಯಾರಂಟಿ ಸಂಭ್ರಮೋತ್ಸವ

0
7

ಉಚ್ಚಿಲ: ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ | ಪಂಚಗ್ಯಾರಂಟಿ ಸಂಭ್ರಮೋತ್ಸವ ನ.22ರಂದು ನಡೆಯಲಿದೆ.

ಅಂದು ಬೆಳಗ್ಗೆ 10.30ಕ್ಕೆ ಉಚ್ಚಿಲ ಗ್ರಾಮ ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗೃಹಲಕ್ಷ್ಮಿ ಯೋಜನೆಯ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದ ಫಲಾನುಭವಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ಹಾಗೂ ಸಂಭ್ರಮಾಚರಣೆ ನಡೆಯಲಿದೆ.

ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುಕುಮಾರ್ ಬಂಗೇರ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಯು.ಸಿ. ಶೇಕಬ್ಬ ಅವರು ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.