ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿಯನ್ನು ತುಳು ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.
ಹಿರಿಯ ರಂಗ ನಿರ್ದೆಶಕ ಜಗನ್ ಪವಾರ್ ಬೇಕಲ್ ಅವರು ಬರೆದ ‘ಮಹಾತ್ಮೆ ಕುದ್ಮುಲ್ ‘ ತುಳು ನಾಟಕ ಕೃತಿಯನ್ನು ದ.ಕ.ಜಿಲ್ಲಾ ಧರ್ಮಿಕ ಪರಿಷತ್ತಿನ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಅವರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಿದ್ದರು. ನಾಟಕ ಕೃತಿ ಬಿಡುಗಡೆ ಬಳಿಕ ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ,ಜರ್ನಿ ಥಿಯೇಟರ್ ಗ್ರೂಪ್ ಪ್ರಸ್ತುತಿಯಲ್ಲಿ ನಾಟಕದ ಪ್ರಥಮ ರಂಗ ಪ್ರದರ್ಶನ ನಡೆಯಿತು.
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಎಸ್ .ಅಪ್ಪಿ ಅವರು ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಕೃಷ್ಣಪ್ಪ ಕೊಂಚಾಡಿ, ಅತ್ತಾವರ ಕರ್ದಬ್ಬು ದೈವಸ್ಥಾನದ ಗುರಿಕಾರ ಟಿ.ಹೊನ್ನಯ್ಯ ಅತ್ತಾವರ ಬಾಬುಗುಡ್ಡೆ, ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಕೊರಗ ಬೆಳುವಾಯಿ, ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೃಷ್ಣಮರ್ತಿ, ನಿರ್ದೇಶಕ ವಿದ್ದು ಉಚ್ಚಿಲ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್, ಪಾಂಗಾಳ ಬಾಬು ಕೊರಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕರ್ಯಕ್ರಮ ನಿರೂಪಿಸಿ, ವಂದಿಸಿದರು.

