ಕಾಪು : ಬೀಚ್‌ನ ಸಮುದ್ರದಲ್ಲಿ ಸಂಜೆ ಆಡುತ್ತಿದ್ದ ಇಬ್ಬರು ನೀರು ಪಾಲಾಗಿರುವ ಬಗ್ಗೆ ವರದಿಯಾಗಿದೆ. ದಾವಣಗೆರೆ ಕುಟುಂಬ ಕಾಪು ಬೀಚ್‌ಗೆ ವಿಹಾರಕ್ಕೆ ಬಂದಿದ್ದು, ಅದರಲ್ಲಿದ್ದ ಐವರು ಯುವಕರು ಸಮುದ್ರದ ನೀರಿಗೆ ಇಳಿದು ಆಡುತ್ತಿದ್ದರೆನ್ನಲಾಗಿದೆ. ಈ ವೇಳೆ ಅವರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿತ್ತು .ಇಬ್ಬರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು ಇದೀಗ ಒಬ್ಬನ ಮೃತದೇಹ ಪತ್ತೆಯಾಗಿದೆ.

