ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ : ಭತ್ತದ ಗದ್ದೆಯ ಕೊಯ್ಲು ಕಟಾವು

0
16

ಅಂದು ಗದ್ದೆ ನಾಟಿ – ಇಂದು ಕೊಯ್ಲು ಕಟಾವು ಮಾಡಿ ಎಲ್ಲರ ಗಮನ ಸೆಳೆದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ತಂಡ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದೊಂದಿಗೆ ಅಂದು ಜೂನ್ ತಿಂಗಳಲ್ಲಿ ಸಂಘದ ಸದಸ್ಯರೆಲ್ಲರೂ ಸೇರಿ ಕುಡುಂದೂರಿನ ಗದ್ದೆಯಲ್ಲಿ ನಾಟಿ ಕಾರ್ಯ ಮಾಡಿ ಕೃಷಿ ಚಟುವಟಿಕೆಯ ಮೂಲಕ ಎಲ್ಲರ ಗಮನ ಸೆಳೆದಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ತಂಡ ಇಂದು ಆಧುನಿಕ ತಂತ್ರಜ್ಞಾನದ ಯಂತ್ರಗಳ ಭರಾಟೆಯ ನಡುವೆಯೂ ಸಂಘದ ಸದಸ್ಯರೇ ಸೇರಿಕೊಂಡು ಭತ್ತದ ಕೊಯ್ಲು ಸಾಂಪ್ರದಾಯಿಕ ಕಟಾವು ಮಾಡಿ, ತುಳುನಾಡಿನ ಸಾಂಪ್ರದಾಯಿಕ ಪಡಿಮಂಚ ಬಳಕೆ ಮಾಡಿ ಭತ್ತದ ಪೈರನ್ನು ಬೇರ್ಪಡಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಯಂತ್ರಗಳ ಭರಾಟೆಯ ನಡುವೆಯೂ ಪಡಿಮಂಚ ಬಳಕೆ

ಭತ್ತದ ಪೈರಿನಿಂದ ಕಾಳನ್ನು ಬೇರ್ಪಡಿಸಲು ಎಲ್ಲೆಡೆ ಯಂತ್ರೋಪಕರಣಗಳನ್ನು ಬಳಸುತ್ತಿರುವ ಈ ಕಾಲಘಟ್ಟದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಸದಸ್ಯರು ಸೇರಿ ಕೃಷಿ ಭೂಮಿಯಲ್ಲಿ ಬೆಳೆದ ಪೈರನ್ನು ಪಡಿಮಂಚ ಬಳಸಿ ಭತ್ತದ ಪೈರಿನ ಕಾಳನ್ನು ಬೇರ್ಪಡಿಸುವ ಮೂಲಕ ಸಾಂಪ್ರದಾಯಿಕ ವಿಧಾನವನ್ನು ಮುಂದುವರಿಸಿ ಎಲ್ಲರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ, ಸಂಚಾಲಕ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ನಿಕಟ ಪೂರ್ವಾಧ್ಯಕ್ಷ ದಿನೇಶ್ ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಉದಯ ಅಂಚನ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷತೆ ಅಶ್ವಿನಿ ಬೋಳ, ಕಾರ್ಯದರ್ಶಿ ಹರ್ಷಲ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ, ಲೀಲಾ ಪೂಜಾರಿ, ಸುಲೋಚನ ಕೋಟ್ಯಾನ್, ಸಂಧ್ಯಾ ಶೆಟ್ಟಿ, ವೀಣಾ ಪೂಜಾರಿ, ಅನ್ನಪೂರ್ಣ ಕಾಮತ್ ಮೊದಲಾದವರಿದ್ದರು.