ಹಿಂದೂ ಮಹಾಸಭಾ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಕ್ಷಿತಾ ಪೂಜಾರಿ ನೇಮಕ

0
5

ಉಡುಪಿ : ಹಿಂದೂ ಮಹಾಸಭಾ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ಅಕ್ಷತಾ ಪೂಜಾರಿ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಹಿಂದೂ ಮಹಾಸಭಾ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಚಕ್ರವರ್ತಿ ಅವರು ಸಂಘಟನೆಯ ರಾಜ್ಯ ಘಟಕದ ಅನುಮೋದನೆಯ ಮೇರೆಗೆ ಶ್ರೀಮತಿ ಅಕ್ಷಿತಾ ಪೂಜಾರಿ ಅವರಿಗೆ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ವಕ್ತಾರರಾದ Dr. ಪ್ರಮೋದ್ ಉಚ್ಚಿಲ್ ಉಪಸ್ಥಿತರಿದ್ದರು.

ಮಹಿಳೆಯರನ್ನು ಸಂಘಟನಾತ್ಮಕವಾಗಿ ಒಗ್ಗೂಡಿಸುವುದು, ಮಹಿಳಾ ಘಟಕವನ್ನು ಜಿಲ್ಲಾದ್ಯಂತ ವಿಸ್ತರಿಸುವುದು, ಸಂಘಟನೆಯ ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ನೂತನ ಅಧ್ಯಕ್ಷರಿಗೆ ವಹಿಸಲಾಗಿದೆ.

ಈ ನೇಮಕಾತಿಯ ಮೂಲಕ ಉಡುಪಿ ಜಿಲ್ಲೆಯಲ್ಲಿ ಮಹಿಳಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿದೆ.

ನೂತನ ಅಧ್ಯಕ್ಷೆ ಶ್ರೀಮತಿ ಅಕ್ಷಿತಾ ಪೂಜಾರಿ ಅವರಿಗೆ ಸಂಘಟನೆಯ ಪದಾಧಿಕಾರಿಗಳು ಶುಭಾಶಯಗಳನ್ನು ಸಲ್ಲಿಸಿದರು.