ಕಾರ್ಕಳ: ಕುಲಾಲ ಸಂಘ ಬೋಳ (ರಿ.) ಇದರ ವತಿಯಿಂದ 12ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆಯು ನವೆಂಬರ್ 29ರಂದು ಆದಿತ್ಯವಾರ ಬೋಳ ಪಂಚಾಯತ್ನ ಭಗತ್ ಸಿಂಗ್ ಸಭಾಭವನದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಸಂಘದ ಅಧ್ಯಕ್ಷರಾದ ಗಣೇಶ್ ಮೂಲ್ಯ ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದೆ. ಬಳಿಕ ಬೆಳಿಗ್ಗೆ 10.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಣೇಶ್ ಮೂಲ್ಯ ವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದಲ್ಲಿ ಆಸನ ಸ್ವೀಕಾರ, ಪ್ರಾರ್ಥನೆ, ಸ್ವಾಗತ ಭಾಷಣ, ವಾರ್ಷಿಕ ವರದಿ ವಾಚನ, ಲೆಕ್ಕಪತ್ರ ಮಂಡನೆ, ಲೆಕ್ಕ ಪರಿಶೋಧಕರ ಆಯ್ಕೆ, ಅತಿಥಿಗಳ ಭಾಷಣ, ಅಧ್ಯಕ್ಷರ ಭಾಷಣ ಹಾಗೂ ಸಭಿಕರ ಅನಿಸಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇರ್ವತ್ತೂರು ಕುಲಾಲ ಸಂಘದ ಅಧ್ಯಕ್ಷರಾದ ಸುರೇಶ್ ಬಂಗೇರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರೀತಿಭೋಜನ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತರು ನವೆಂಬರ್ 25ರೊಳಗೆ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿಯವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ.
ಪರಿಸರದ ಕುಲಾಲ ಬಾಂಧವರು ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಕಾರ್ಯಕಾರಿ ಮಂಡಳಿ ವಿನಂತಿಸಿದೆ.
ಹೆಚ್ಚಿನ ಮಾಹಿತಿಗಾಗಿ: 9686562335

