ಪುತ್ತೂರು: ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ. ತೃತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.
ಬೆಳ್ಳಿಪ್ಪಾಡಿ ಗ್ರಾಮದ ಕೆ.ವಿ. ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾದ ಖುಷಿ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಕಾಲೇಜು ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ಮಾರ್ಗದರ್ಶನದಲ್ಲಿ ಖುಷಿ ತರಬೇತಿ ಪಡೆದಿದ್ದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

