ಎಲ್ಪೇಲು: ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

0
5

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಣ ಪೂರಕ: ರಾಜೇಶ್ ನಾಯ್ಕ್

ಬಂಟ್ವಾಳ:ಮಕ್ಕಳು ಬಾಲ್ಯದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಆಟ ಮತ್ತು ಕಲಿಕೆ ಜೊತೆಗೆ ಬೆಳೆದಾಗ ಅವರ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಣ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.

ಇಲ್ಲಿನ ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಿತ ತಾಲ್ಲೂಕು ಪಂಚಾಯಿತಿ ಮತ್ತು ಬಂಟ್ವಾಳ ಶಿಶು ಅಭಿವೃದ್ಧಿ ಯೋಜನೆ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಹಾಗೂ ಬಾಲವಿಕಾಸ ಸಮಿತಿ ಸಹಭಾಗಿತ್ವದಲ್ಲಿ ನಿರ್ಮಿಸಿದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ವೇಳೆ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಉದ್ಯಮಿ ಶಕ್ತಿಪ್ರಸಾದ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ಬೇಬಿ ಮತ್ತು ರಶ್ಮಿತ್ ಶೆಟ್ಟಿ, ಗ್ರಾ.ಪಂ. ಆಡಳಿತಾಧಿಕಾರಿ ಶೇಷಗಿರಿ ನಾಯ್ಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್, ಅಂಗನವಾಡಿ ಸಹಾಯಕಿ ಬೇಬಿ ಇದ್ದರು.
ಮೇಲ್ವಿಚಾರಕಿ ನೀತಾ ಕುಮಾರಿ ಡಿ. ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಬೇಬಿ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.