ಸಂಕಷ್ಟಹರ ಚತುರ್ಥಿ ಪ್ರಯುಕ್ತ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

0
10

ಅಳದಂಗಡಿ: ಸುಂಕದಕಟ್ಟೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನವೆಂಬರ್ 27ರ ಶುಕ್ರವಾರದಂದು ಸಂಕಷ್ಟಹರ ಚತುರ್ಥಿಯನ್ನು ಭಕ್ತಿಭಾವದಿಂದ ಆಚರಿಸಲಾಗುವುದು.

ಈ ಪ್ರಯುಕ್ತ ದೇವಸ್ಥಾನದಲ್ಲಿ ಗಣಹವನ, ಅಪ್ಪ ಸೇವೆ, ಪಂಚಕಜ್ಜಾಯ ಸೇವೆ, ಭಜನಾ ಸತ್ಸಂಗ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ.

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.