ಶಿರ್ತಾಡಿಯಲ್ಲಿ ನ.29ರಂದು ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಗುರು ಜಯಂತಿ ಆಚರಣೆ

0
10

ಶಿರ್ತಾಡಿ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಘಟಕ ಶಿರ್ತಾಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಗುರು ಜಯಂತಿಯನ್ನು ನವೆಂಬರ್ 29ರಂದು ಭಕ್ತಿಭಾವದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ.

ಗುರು ಜಯಂತಿಯ ಅಂಗವಾಗಿ ಗುರುಪೂಜೆ ಹಾಗೂ ಧನ್ವಂತರಿ ಮಹಾಯಾಗ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ ಉದಯಕಾಲದಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗುರುಗಳ ಆಶೀರ್ವಾದ ಪಡೆಯುವಂತೆ ಸಂಘಟಕರು ಆತ್ಮೀಯ ಆಮಂತ್ರಣ ನೀಡಿದ್ದಾರೆ.

ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಆಯೋಜಿಸಿದ್ದಾರೆ.