ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಭಿಯಾನ

0
11

DLSA ವತಿಯಿಂದ ಸುರಕ್ಷಿತ ಬಾಲ್ಯ, ಆರೋಗ್ಯಕರ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

– ಮಂದಾರ ರಾಜೇಶ್

ಮಾದಕ ವಸ್ತುಗಳ ಬಳಕೆಯಿಂದ ಯುವಜನತೆಯನ್ನು ದೂರವಿರಿಸಿ, ಆರೋಗ್ಯಕರ ಹಾಗೂ ಸ್ವಸ್ಥ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಆಶ್ರಯದಲ್ಲಿ ‘ಸುರಕ್ಷಿತ ಬಾಲ್ಯ, ಆರೋಗ್ಯಕರ ಭವಿಷ್ಯ – ಮಾದಕ ವ್ಯಸನಮುಕ್ತ ಭಾರತ ಅಭಿಯಾನ’ದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 23 11 2026ರಂದು ಮಂಗಳೂರು ನಗರದ ಪುರಭವನದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಅಭಿಯಾನದಲ್ಲಿ ಪಾಲ್ಗೊಂಡರು.

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಬದುಕಿನ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ನ್ಯಾಯಾಧೀಶರು ಆದ ಶ್ರೀಮತಿ ಜೈಬನ್ನಿಸ ಇವರ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸೇವಾ ಪ್ರಾಧಿಕಾರದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.